Wednesday, 24 October 2012
ಡಾ| ಡಿ.ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕ ವರ್ಧಂತಿ
ಉಳೆಪಾಡಿಯಲ್ಲಿ ಶರನ್ನವರಾತ್ರಿ ಧಾರ್ಮಿಕ ಸಭೆ
ನಮ್ಮ ನಾಡಿನ ನುಡಿ ಸಂಸ್ಕಾರ ಆಚರಣೆಗಳನ್ನು ಉಳಿಸಿ ಬೆಳಿಸಿಕೊಳ್ಳಬೇಕು ನಾಡಿನ ಅಭ್ಯುದಯಕ್ಕಾಗಿ ಬದ್ಧರಾಗಬೇಕು ಎಂದು ಮಾಜಿ ಕಸಾಪ ಅಧ್ಯಕ್ಷ ಧರ್ಮದರ್ಶಿ ಹರಿಕೃಷ್ಣ ಪುನರೂರು ಹೇಳಿದರು.
ಉಳೆಪಾಡಿ ದುರ್ಗಾಪರಮೇಶ್ವರೀ ಮಹಮ್ಮಾಯೀ ದೇವಸ್ಥಾನದಲ್ಲಿ ಮಂಗಳವಾರ ನಡೆದ ಶರನ್ನವರಾತ್ರಿ ಧಾರ್ಮಿಕ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಈ ಸಂದರ್ಭ ಸಮಾಜ ಸೇವೆಗಾಗಿ ಶ್ರಮಿಸಿದ ತಾಳಿಪಾಡಿ ಮಠ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನ ಆಡಳಿತ ಮೊಕ್ತೇಸರ ದಯಾನಂದ ಭಟ್, ಸಮಾಜಸೇವಿಕೆ ಶ್ರೀಮತಿ ಕೇಸರಿ ಪುರಂದರ ಬಳ್ಕುಂಜೆ, ದೈವಾರಾಧಕ ಆನಂದ ಪಾಣಾರ, ದುರ್ಗಾಪರಮೇಶ್ವರೀ ಮಹಮ್ಮಾಯೀ ದೇವಸ್ಥಾನ ಉಳೆಪಾಡಿ ಕಾರ್ಯಧ್ಯಕ್ಷ ನಾರಾಯಣ ಶೆಟ್ಟಿ ಹಾಗೂ ಪಟ್ಟೆ ಭಜನಾ ಮಂಡಳಿಯನ್ನು ದೇವಳದ ವತಿಯಿಂದ ಸನ್ಮಾನಿಸಲಾಯಿತು.
ವೇದಿಕೆಯಲ್ಲಿ ಯುಗಪುರುಷ ಪ್ರಧಾನ ಸಂಪಾದಕ ಭುವನಾಭಿರಾಮ ಉಡುಪ, ಸಂತೋಷ್ ಕುಮಾರ್ ಬೆಂಗಳೂರು. ಶ್ರೀಮತಿ ಮೋಹನದಾಸ ಸುರತ್ಕಲ್, ಕರುಣಾಕರ ರೈ, ವೈ. ಕೃಷ್ಣ ಸಾಲ್ಯಾನ್ ಮತ್ತಿತರರು ಉಪಸ್ಥಿತರಿದ್ದರು.
ಉಳೆಪಾಡಿ ದುರ್ಗಾಪರಮೇಶ್ವರೀ ಮಹಮ್ಮಾಯೀ ದೇವಸ್ಥಾನದ ಧರ್ಮದರ್ಶಿ ಮೋಹನದಾಸ ಸುರತ್ಕಲ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಶರನ್ನವರಾತ್ರಿ ಆರಾಧನೆ ಪ್ರಯುಕ್ತ ಮಾಹಾ ಚಂಡಿಕಾ ಯಾಗ ನಡೆಯಿತು.
Thursday, 18 October 2012
ಯುಗಪುರುಷ" ದಸರಾ-ದೀಪಾವಳಿ ವಿಶೇಷಾಂಕ ಬಿಡುಗಡೆ
ಕಿನ್ನಿಗೋಳಿ : ಕಳೆದ ೬೬ವರ್ಷಗಳಿಂದ ಕಿನ್ನಿಗೋಳಿಯಂತಹ ಗ್ರಾಮಾಂತರ ಪ್ರದೇಶದಲ್ಲಿ ನಿರಂತರವಾಗಿ ಪ್ರಕಟಗೊಳ್ಳುತ್ತಿರುವ, ಕರ್ನಾಟಕ ರಾಜ್ಯದ ಮಾಸಪತ್ರಿಕೆಗಳಲ್ಲಿ ಪ್ರಥಮ ಸ್ಥಾನದಲ್ಲಿರುವ, ಸುವರ್ಣ ಕರ್ನಾಟಕ ಏಕೀಕರಣ ಪ್ರಶಸ್ತಿ ಪುರಸ್ಕೃತ "ಯುಗಪುರುಷ" ಕನ್ನಡ ಮಾಸ ಪತ್ರಿಕೆಯ ದಸರಾ-ದೀಪಾವಳಿ ವಿಶೇಷಾಂಕವನ್ನು ಅಕ್ಟೋಬರ್ ೧೭ರಂದು ಗುರುವಾರ ಶ್ರೀ ಕ್ಷೇತ್ರ ಕಟೀಲಿನಲ್ಲಿ ಕೆ.ಲಕ್ಷ್ಮೀನಾರಾಯಣ ಆಸ್ರಣ್ಣರು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ವಾಸುದೇವ ಆಸ್ರಣ್ಣ, ಕಮಲಾದೇವಿ ಪ್ರಸಾದ ಆಸ್ರಣ್ಣ, ಕಸಾಪ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು, ಅಜಾರು ನಾಗರಾಜ ರಾಯ, ಗುರುಪುರ ಗೋಳಿದಡಿ ವರ್ಧಮಾನ ದುರ್ಗಾಪ್ರಸಾದ ಶೆಟ್ಟಿ, ದೇವಪ್ರಸಾದ ಪುನರೂರು, ಯುಗಪುರುಷದ ಪ್ರಧಾನ ಸಂಪಾದಕ ಕೊಡೆತ್ತೂರು ಭುವನಾಭಿರಾಮ ಉಡುಪರು ಉಪಸ್ಥಿತರಿದ್ದರು.
Subscribe to:
Posts (Atom)

